ಮುಜಾಫರ್ ನಗರ, ಡಿ.13 (DaijiworldNews/HR): ಏಳು ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಬಾಲಕಿಯು ಕೆಲವು ಗಂಟೆಗಳ ಕಾಲ ನಾಪತ್ತೆಯಾದ ಹಿನ್ನಲೆಯಲ್ಲಿ ಆಕೆಯ ಮನೆಯವರು ಅವಳನ್ನು ಹುಡುಕಲು ಪ್ರಾರಂಭಿಸಿದ್ದಾಗ ಗ್ರಾಮದ ಹತ್ತಿರದ ಮನೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಳು ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376ಡಿ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಗಿರಿಜಾ ಶಂಕರ್ ತ್ರಿಪಾಠಿ ತಿಳಿಸಿದ್ದಾರೆ.