ನವದೆಹಲಿ,ಡಿ.13 (DaijiworldNews/HR): ಸಂಸತ್ತಿನ ಮೇಲೆ ಡಿಸೆಂಬರ್ 13, 2001ರಲ್ಲಿ 19 ವರ್ಷಗಳ ಹಿಂದೆ ನಡೆದ ಹೇಡಿತನದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು 19 ವರ್ಷಗಳ ಹಿಂದೆ ಭೀಕರ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, "2001 ರಲ್ಲಿ ಈ ದಿನ ನಮ್ಮ ಸಂಸತ್ತಿನ ಮೇಲೆ ನಡೆಸಿದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ಮಾಡಿದವರಿಗೆ ಭಾರತ ಯಾವಾಗಲೂ ಕೃತಜ್ಞರಾಗಿರಬೇಕು" ಎಂದು ಹೇಳಿದ್ದಾರೆ.