ಬೆಂಗಳೂರು, ಡಿ.13 (DaijiworldNews/PY): "ಲಕ್ಷ್ಮಣ ಸವದಿ ಅವರೇ ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಮೊಬೈಲ್ನಲ್ಲಿ ರೋಮಾಂಚನದ ಚಿತ್ರ ವೀಕ್ಷಿಸಿದಂತಲ್ಲ" ಎಂದು ಕಾಂಗ್ರೆಸ್ ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, "ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ. ಪ್ರಯಾಣಿಕರ ಪರದಾಟ, ಅನಾನುಭವಿ ಖಾಸಗಿ ಚಾಲಕರ ಪೀಕಲಾಟ, ಸರ್ಕಾರದ ಮೊಂಡು ಹಠ, ಖಾಸಗಿ ಬಸ್ ಮಾಲೀಕರ ನಿರಾಕರಣೆ. ಲಕ್ಷ್ಮಣ ಸವದಿ ಅವರೇ ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಸದನದಲ್ಲಿ ಕೂತು ಮೊಬೈಲ್'ನಲ್ಲಿ "ರೋಮಾಂಚನದ" ಚಿತ್ರ ವೀಕ್ಷಿಸಿದಂತಲ್ಲ!!" ಎಂದು ಕಾಂಗ್ರೆಸ್ ಕಿಡಿಕಾರಿದೆ.
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಗುರುವಾರದಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ರವಿವಾರವೂ ಸಾರಿಗೆ ನಿಗಮಗಳ ನೌಕರರ ಮುಷ್ಕರ ಮುಂದುವರೆದಿದೆ.