ಬೆಂಗಳೂರು,ಡಿ.13 (DaijiworldNews/HR): ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಅವರ ಮನವೊಲಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ ಸಭೆ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, "ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಭೆ ಮುಕ್ತಾಯಗೊಂಡಿದ್ದು, ಅರ್ಧ ಗಂಟೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಉಪ ಮುಖ್ಯಮಂತ್ರಿ,ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ) ಅಧ್ಯಕ್ಷ ಚಂದ್ರಪ್ಪ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ, ಸಾರಿಗೆ ಆಯುಕ್ತ ಶಿವಕುಮಾರ್ ಸೇರಿದಂತೆ ಮತ್ತಿತರರೌ ಪಾಲ್ಗೊಂಡಿದ್ದಾರೆ.