ಲಕ್ನೋ, ಡಿ.13 (DaijiworldNews/PY): ವೈದ್ಯಕೀಯ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಬಳಿಕ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕಡ್ಡಾಯವಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಇಲ್ಲವಾದಲ್ಲಿ ಸರ್ಕಾರಕ್ಕೆ 1 ಕೋಟಿ. ರೂ. ಪಾವತಿ ಮಾಡಬೇಕು ಎಂದು ಉತ್ತರಪ್ರದೇಶ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸ್ನಾತಕ್ಕೋತರ ಕೋರ್ಸ್ ಪೂರ್ಣಗೊಂಡ ಬಳಿಕ ಸೇವೆ ಪ್ರಾರಂಭ ಮಾಡುವ ವೈದ್ಯರು ಬಳಿಕ ಉನ್ನತ ಅಧ್ಯಯನ ಹಾಗೂ ತರಬೇತಿಗಾಗಿ ನಿರಾಕ್ಷೇಪಣಾ ಪತ್ರ ಪಡೆದುಕೊಂಡು ಸೇವೆಯನ್ನು ಮುಂದುವರಿಸುತ್ತಿರಲಿಲ್ಲ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯುಪಿ ಸರ್ಕಾರ ಈ ಆದೇಶ ಹೊರಡಿಸಿದೆ.
"ಕೋರ್ಸ್ ಮುಗಿದ ನಂತರ, ಅವರು 10 ವರ್ಷಗಳ ಕಾಲ ನಿರಂತರವಾಗಿ ಸರ್ಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ" ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ತಿಳಿಸಿದ್ದಾರೆ.
"ಇದೇ ಆದೇಶವು 2017ರ ಏಪ್ರಿಲ್ 3 ರಂದು ಹೊರಡಿಸಲಾಗಿತ್ತು. ಇದೇ ಷರತ್ತುಗಳನ್ನು ಉಲ್ಲೇಖ ಮಾಡಿ ಹೊಸ ಆದೇಶ ಹೊರಡಿಸಲಾಗಿದೆ" ಎಂದು ಹೇಳಿದ್ದಾರೆ.