ಚಂಡೀಗಡ, ಡಿ.13 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದನ್ನು ಬೆಂಬಲಿಸಿ ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಚಂಡೀಗಡದ ಕಾರಾಗೃಹಗಳ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಗಿ ನೇಮಕಗೊಂಡಿದ್ದ ಲಖ್ಮಿಂದರ್ ಸಿಂಗ್ ಜಾಖರ್(56) ಅವರು ರಾಜೀನಾಮೆ ನೀಡಿದ್ದಾರೆ.
ಇನ್ನು ನಾನು ಎಲ್ಲ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ್ದು, ನನ್ನ ರಾಜೀನಾಮೆಯನ್ನು ಸ್ವೀಕರಿಸಲು ಯಾವುದೇ ತೊಂದರೆ ಆಗುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಲಖ್ಮಿಂದರ್ ಸಿಂಗ್ ಜಾಖರ್ ಹೇಳಿದ್ದಾರೆ.