ಕಲಬುರ್ಗಿ, ಡಿ.13 (DaijiworldNews/HR): ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ )ಯ ನೇಮಕಾತಿ ಪಟ್ಟಿಯಲ್ಲಿನ 124 ಅಭ್ಯರ್ಥಿಗಳ ನೇಮಕಾತಿ ಆದೇಶ ನೀಡುವಂತೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, "ಕರ್ನಾಟಕ ಲೋಕಸೇವಾ ಆಯೋಗ ಶೀಘ್ರ ಲಿಪಿಗಾರರು ಹಾಗೂ ಬೆರಳಚ್ಚುಗಾರರ ಹುದ್ದೆ ನೇಮಕಾತಿಯಲ್ಲಿ ಉತ್ತೀರ್ಣರಾದ 661 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಳೆದ ವರ್ಷ ನವಂಬರ್ನಲ್ಲಿ ಪ್ರಕಟಿಸಲಾಗಿತ್ತು.
ಇನ್ನು ನೇಮಕಾತಿ ಪ್ರಕ್ರಿಯೆ ನಡೆದು 4 ವರ್ಷ ಕಳೆದಿದ್ದು ಉದ್ಯೋಗ ಇಲ್ಲದ ಈ 124 ಅಭ್ಯರ್ಥಿಗಳು ಕಷ್ಟ ಎದುರಿಸುತ್ತಿದ್ದು, ಬಡತನದ ಹಿನ್ನೆಲೆಯಿಂದ ಬಂದಿರುವ ಅಭ್ಯರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಆದರೆ ನೇಮಕಾತಿ ಆದೇಶದ ವಿಳಂಬದಿಂದಾಗಿ ಕಷ್ಟದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.