ಬೆಂಗಳೂರು, ಡಿ.13 (DaijiworldNews/PY): ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿದ್ದು, ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಡಿಕೆಶಿ ಅವರು, ಬೆಂಗಳೂರಿನ ಬೆನ್ಸನ್ ಟೌನ್ನಲ್ಲಿರುವ ಇಬ್ರಾಹಿಂ ಅವರ ಮನೆಗೆ ತೆರಳಿ, ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಇತ್ತೀಚೆಗೆ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೂ ಕೂಡಾ ಭೇಟಿ ಮಾಡಿ, ಮಾತುಕತೆ ನಡೆಸಿದ್ದರು.
ಇಬ್ರಾಹಿಂ ಅವರು ಪುನಃ ಜೆಡಿಎಸ್ ಪಕ್ಷಕ್ಕೆ ಸೇರಲು ಒಲುವು ತೋರಿದ್ದು, ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.