ನವದೆಹಲಿ, ಡಿ. 13 (DaijiworldNews/SM): ಬಿಜೆಪಿ ರಾಷ್ಟ್ರಾಧ್ಯಕ್ಷರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಗತ್ ಪ್ರಕಾಶ್ ನಡ್ಡಾ ಅವರಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ.
ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದ ನಡ್ಡಾ ಅವರಲ್ಲಿ ಸೋಂಕು ಪತ್ತೆಯಾಗಿದೆ. ಪರೀಕ್ಷೆ ನಡೆಸಿರುವ ವೈದ್ಯರು, ಅವರನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಿದ್ದಾರೆ.
60 ವರ್ಷದ ನಡ್ಡಾ ಅವರು ಕೊರೋನಾ ಪ್ರಾಥಮಿಕ ರೋಗಲಕ್ಷಣಗಳನ್ನು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಆದರೆ ಅವರ ಆರೋಗ್ಯವು ಉತ್ತಮವಾಗಿದೆ ಎಂದು ಹೇಳಿದ್ದಾರೆ.