ಮಂಗಳೂರು, ಡಿ. 13 (DaijiworldNews/SM): ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 14ರ ಸೋಮವಾರದಂದು ಖಾಸಗಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಚಾಲಕ ಮಾಲಕ ಸಂಘದ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು ಖಾಸಗಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತದೆ. ಕೆ.ಎಸ್.ಆರ್.ಟಿ.ಸಿ. ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಾವು ತಟಸ್ಥ ನಿಲುವನ್ನು ಹೊಂದಿದ್ದೇವೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರ ಬಯಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಪ್ರದೇಶಕ್ಕೂ ನಮ್ಮ ಖಾಸಗಿ ಬಸ್ ಸೇವೆಯನ್ನು ನೀಡಲು ತಯಾರಿದ್ದೇವೆ ಎಂದು ದ.ಕ. ಜಿಲ್ಲಾ ಬಸ್ಸು ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸೋಮವಾರ ಖಾಸಗಿ ಬಸ್ ಬಂದ್ ಇಲ್ಲ. ರಾಜ್ಯಾದ್ಯಂತ ಎಂದಿನಂತೆ 8,500 ಬಸ್ ಓಡಾಡುತ್ತದೆ. ಸರಕಾರದ ಜೊತೆ ಖಾಸಗಿ ಬಸ್ ಗಳು ಬೆಂಬಲವಾಗಿ ನಿಂತಿದೆ. ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧ ಇಲ್ಲ. ರಾಜ್ಯದ ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದುವುದಾಗಿ ಉಡುಪಿಯಲ್ಲಿ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿದ್ದಾರೆ.