ಲಕ್ನೋ,ಡಿ.14(DaijiworldNews/HR): ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದೂಸ್ಥಾನಿ ಅವಾಮ್ ಮೋರ್ಚಾ (ಎಚ್ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನಾನು ಕೊರೊನಾ ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ, ಹಾಗಾಗಿ ಕಳೆದ ಒಂದು ವಾರದಿಂದ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದ್ದಾರೆ".
ಇನ್ನು ಜಿತನ್ ರಾಮ್ ಮಾಂಝಿ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು.