ಬೆಂಗಳೂರು, ಡಿ.14 (DaijiworldNews/PY): ಕೋಡಿಹಳ್ಳಿ ಚಂದ್ರಶೇಖರ್ ಅವರು ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿರುವ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ" ಎಂದಿದ್ದಾರೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು, ಈ ಮುಷ್ಕರಕ್ಕೆ ರೈತ ಮುಖಂಡ ಕೋಡಿಹಳ್ಲಿ ಚಂದ್ರಶೇಖರ್ ಬೆಂಬಲ ನೀಡಿದ್ದಾರೆ.