ಬೆಂಗಳೂರು, ಡಿ.14 (DaijiworldNews/PY): ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎಂದು ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಪಾಕ್ ಹಾಗೂ ಚೀನಾದ ಕೈವಾಡವಿದೆ ಎಂದು ಹೇಳಿದ್ದ ಕೇಂದ್ರ ಸಚಿವ ರಾವ್ಸಾಹೇಬ್ ದಾನವ್ ಹೇಳಿಕೆಯ ಬಗ್ಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ರೈತ ಪ್ರತಿಭಟನೆಯ ಹಿಂದೆ ಪಾಕಿಸ್ತಾನ ಹಾಗೂ ಚೀನಾದ ಕೈವಾಡವಿದೆ ಎಂಬ ಕೇಂದ್ರ ಸಚಿವ ರಾವ್ಸಾಹೇಬ್ ದಾನವ್ ಹೇಳಿಕೆ ಖಂಡನೀಯ. ಇದು ರೈತ ಪ್ರತಿಭಟನೆಯ ದಿಕ್ಕು ತಪ್ಪಿಸುವ ಯತ್ನ. ಪ್ರತಿಭಟನೆಯ ಹಿಂದೆ ನೆರೆರಾಷ್ಟ್ರಗಳ ಕೈವಾಡವಿದ್ದರೆ ಸಾಕ್ಷಿ ಸಮೇತ ಸಾಬೀತುಪಡಿಸಲಿ. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹಾರಿಸಿ ರೈತರಿಗೆ ಅಪಮಾನ ಮಾಡುವ ಷಡ್ಯಂತ್ರವೇಕೆ?" ಎಂದು ಪ್ರಶ್ನಿಸಿದ್ದಾರೆ.
"ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎಂದು ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಪಾಕ್ ಹಾಗೂ ಚೀನಾದ ಕೈವಾಡವಿದೆ" ಕೇಂದ್ರ ಸಚಿವ ರಾವ್ಸಾಹೇಬ್ ದಾನವ್ ಹೇಳಿದ್ದರು.
"ಇದಕ್ಕೂ ಮುನ್ನ ಮುಸ್ಲಿಮರು ಸಿಎಎ ಹಾಗೂ ಎನ್ಆರ್ಸಿಯ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದು, ದೇಶದ ಜನರ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿದ್ದರು. ಆದರೆ, ಅವರು ನಡೆಸಿದ್ದ ಹೋರಾಟ ಸಫಲವಾಗಲಿಲ್ಲ. ಈಗ ನೂತನ ಕೃಷಿ ಕಾಯ್ದೆಯಿಂದ ನನಗೆ ನಷ್ಟ ಉಂಟಾಗುತ್ತಿದೆ ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ" ಎಂದಿದ್ದರು.