ಬೆಂಗಳೂರು, ಡಿ.14 (DaijiworldNews/MB) : ''ಕೊರೊನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದ್ದು ಮೊದಲ ಹಂತದಲ್ಲಿ ಕೊರೊನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ'' ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ''ಕೊರೊನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ'' ಎಂದು ತಿಳಿಸಿದ್ದಾರೆ.