ಚೆನ್ನೈ, ಡಿ.14(DaijiworldNews/HR): ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿಎಂ)ನ 100ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
104 ಮಂದಿ ವಿದ್ಯಾರ್ಥಿಗಳು ಸೇರಿ ಇತರರಿಗೆ ಸೋಂಕು ತಗುಲಿದ್ದು, ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಹೇಳಿದ್ದಾರೆ.
ಇನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸದಲ್ಲಿ ಡಿಸೆಂಬರ್ 1ರಿಂದ 12ರ ವರೆಗೂ 444 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, 104 ಜನರಿಗೆ ಸೋಂಕು ದೃಢಪಟ್ಟಿದೆ.
ಈ ಕಾರಣದಿಂದಾಗಿ ಶಿಕ್ಷಣ ಸಂಸ್ಥೆಯ ಎಲ್ಲ ವಿಭಾಗಗಳು ಹಾಗೂ ಪ್ರಯೋಗಾಲಯಗಳನ್ನು ಮುಚ್ಚಲಾಗಿದ್ದು, ಪ್ರಸ್ತುತ ಸುಮಾರು 700 ಮಂದಿ ಸಂಶೋಧನಾ ವಿದ್ಯಾರ್ಥಿಗಳು ಒಂಬತ್ತು ಹಾಸ್ಟೆಲ್ಗಳಲ್ಲಿ ಉಳಿದಿದ್ದಾರೆ ಎಂದು ಮದ್ರಾಸ್ ಐಐಟಿಯ ವಕ್ತಾರರು ತಿಳಿಸಿದ್ದಾರೆ.