ಕಾಸರಗೋಡು, ಡಿ. 14 (DaijiworldNews/SM): ಕಾರು ಡಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ಅಪರಾಧ ವಿಭಾಗದ ಡಿವೈ ಎಸ್ಪಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ಚಂದೇರ ಸರಕಾರಿ ಶಾಲಾ ಪರಿಸರದಲ್ಲಿ ಕಾರು ಡಿಕ್ಕಿ ಹೊಡೆದು ಘಟನೆ ನಡೆದಿದೆ. ಅಪಘಾತದಲ್ಲಿ ಡಿವೈ ಎಸ್ಪಿ ಪಿ.ಕೆ. ಸುಧಾಕರನ್ ಗಂಭೀರ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಕಾರು ಸ್ಥಳದಿಂದ ಪರಾರಿಯಾಗಿದೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಇನ್ನು ಗಾಯಾಗೊಂಡಿರುವ ಡಿವೈಎಸ್ಪಿಯವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.