ಲಖನೌ,ಡಿ.15 (DaijiworldNews/HR): ಭಗವಾನ್ ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರಾಗಿದ್ದು, ನಾವೆಲ್ಲಾ ರಾಮ ಮತ್ತು ಕೃಷ್ಣನ ಭಕ್ತರು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಈ ಕುರಿತು ಅಯೋಧ್ಯೆಯಲ್ಲಿ ಮಾತನಾಡಿದ ಅವರು, "ಶೀಘ್ರದಲ್ಲೇ ಕುಟುಂಬ ಸಮೇತ ಅಯೋಧ್ಯೆ ರಾಮ ಜನ್ಮಭೂಮಿಗೆ ಭೇಟಿ ನೀಡಿ ರಾಮನಿಗೆ ಪೂಜೆ ಸಲ್ಲಿಸಲಾಗುತ್ತದೆ, ನಾವು ಉತ್ತರಪ್ರದೇಶದ ಆಡಳಿತದಲ್ಲಿದ್ದಾಗ ಅಯೋಧ್ಯೆಯಲ್ಲಿ ಪಾರಿಜಾತ ಗಿಡಗಳ ಸಹಿತ ಪರಿಕ್ರಮ ಮಾರ್ಗ' ನಿರ್ಮಿಸಲಾಗಿತ್ತು. ಈ ವರ್ತುಲ ರಸ್ತೆಯಲ್ಲಿ ದೀಪಾವಳಿ ಹಬ್ಬದ ಬಳಿಕ ಭಕ್ತರು ಪ್ರದಕ್ಷಿಣೆ ಬರುತ್ತಾರೆ" ಎಂದರು
ಇನ್ನು ಸರಯೂ ನದಿ ದಂಡೆಯಲ್ಲಿ, ರಾಮ ದೇವರನ್ನು ಪೂಜಿಸುವ ಸ್ಥಳದಲ್ಲಿ ಧ್ವನಿವರ್ಧಕ ಹಾಗೂ ದೀಪಗಳ ವ್ಯವಸ್ಥೆ ಮಾಡಿದ್ದೇನೆ ಎಂದೂ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳು ರೈತರಿಗೆ ನೀಡಿರುವ 'ಡೆತ್ ವಾರಂಟ್' ಎಂದು ಅಖಿಲೇಶ್ ಯಾದವ್ ಟೀಕಿಸಿದ್ದಾರೆ.