ಬೆಂಗಳೂರು, ಡಿ.15 (DaijiworldNews/HR): ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸೇರಿ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ವಿಧಾನ ಪರಿಷತ್ ನಲ್ಲಿ ಗಲಾಟೆ ನಡೆಯಲು ಬಿಜೆಪಿ ಸದಸ್ಯರೇ ಕಾರಣರಾಗಿದ್ದು, ಕಲಾಪ ನಡೆಸುವಾಗ ಒಂದು ನಿಯಮವಿದೆ. ಆದರೆ ಆ ನಿಯಮಗಳನ್ನು ಬಿಜೆಪಿ ಗಾಳಿಗೆ ತೂರಿದೆ. ಸಭಾಪತಿ ಬಾರದಂತೆ ಅವರೇ ಬಾಗಿಲು ಮುಚ್ಚಿದ್ದಾರೆ. ಇದು ಪ್ರಜಾಪ್ರಭುತ್ವದ ಉಲ್ಲಂಘನೆಯಲ್ಲವೇ? ಇದೆಂತಹ ಗೂಂಡಾಗಿರಿ?" ಎಂದು ಪ್ರಶ್ನಿಸಿದ್ದಾರೆ.
ಇನ್ನು "ಬಿಜೆಪಿಯೊಂದಿಗೆ ಜೆಡಿಎಸ್ ಕೂಡ ಕೈ ಜೋಡಿಸಿದೆ. ಬಿಜೆಪಿ-ಜೆಡಿಎಸ್ ಸದಸ್ಯರು ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ್ದಾರೆ. ಪರಿಷತ್ ನಲ್ಲಿ ಏನು ನಡೆದಿದೆ ಎಂಬುದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ. ಹಾಗಾಗಿ ಇಂತಹ ಗೂಂಡಾಗಿರಿಯನ್ನು ನಾವು ಖಂಡಿಸುತ್ತೇವೆ" ಎಂದು ಹೇಳಿದ್ದಾರೆ.