ಮಂಗಳೂರು, ಡಿ. 15 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 38 ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 32,421ಕ್ಕೆ ಏರಿಕೆಯಾಗಿವೆ.
ಈ ಪೈಕಿ 405 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 4,16,410 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 3,83,989 ಮಂದಿಯ ವರದಿ ನೆಗೆಟಿವ್ ಆಗಿದೆ. ಮಂಗಳವಾರ 37 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆಯನ್ನು 31,285ಕ್ಕೆ ತಲುಪಿಸಲಾಗಿದೆ. ಇನ್ನು ಈವರೆಗೆ ಜಿಲ್ಲೆಯಲ್ಲಿ ಒಟ್ಟು 731 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಮಂಗಳವಾರ ಹೊಸ ಒಂಬತ್ತು ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕರೋನಾ ವೈರಸ್ ಪ್ರಕರಣಗಳ ಒಟ್ಟು ಸಂಖ್ಯೆ 22,913ಕ್ಕೆ ಏರಿಕೆಯಾಗಿದೆ. ಈ ಪೈಕಿ 124 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 2,67,017ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,44,104 ಮಾದರಿಗಳು ನಕಾರಾತ್ಮಕವಾಗಿವೆ.
ಮಂಗಳವಾರ 16 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,602ಕ್ಕೆ ಏರಿಕೆಯಾಗಿದೆ.ಈವರೆಗೆ ಒಟ್ಟು 187 ಸಾವುಗಳು ಸಂಭವಿಸಿವೆ.