ಬೆಂಗಳೂರು, ಡಿ.16 (DaijiworldNews/PY): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.
ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, "ಕರ್ನಾಟಕದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ಜನ್ಮದಿನದಂದು ಸರ್ವಶಕ್ತನಾದ ಭಗವಂತ ಉತ್ತಮ ಆರೋಗ್ಯದಿಂದ ತುಂಬಿದ ದೀರ್ಘ ಜೀವನವನ್ನು ಆಶೀರ್ವದಿಸಲಿ" ಎಂದಿದ್ದಾರೆ.
ಸಿಎಂ ಬಿಎಸ್ಐ ಅವರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, "ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ" ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
"ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ" ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶುಭಕೋರಿದ್ದಾರೆ.
ಶೋಭಾ ಕರಂದ್ಲಾಜೆ ಶುಭಕೋರಿದ್ದು, "ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ" ಎಂದು ಹಾರೈಸಿದ್ದಾರೆ.
"ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾಗಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು" ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಭಕೋರಿದ್ದಾರೆ.
ಕೊರೊನಾ ಸಂಕಷ್ಟದಿಂದ ಜನರು ತೊಂದರೆಗೊಳಗಾಗಿದ್ದು, ಈ ವೇಳೆಯಲ್ಲಿ ಜನ್ಮದಿನವನ್ನು ಆಚರಣೆ ಮಾಡದಿರಲು ಹೆಚ್ಡಿಕೆ ನಿರ್ಧರಿಸಿದ್ದಾರೆ.