ಸಂಭಾಲ್, ಡಿ.16 (DaijiworldNews/MB) : ಉತ್ತರ ಪ್ರದೇಶದಲ್ಲಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿ 25 ಜನರು ಗಾಯಗೊಂಡಿರುವ ಘಟನೆ ಧನಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಆಗ್ರಾ–ಮುರಾದಾಬಾದ್ ರಸ್ತೆಯಲ್ಲಿ ಮಂಜು ಕವಿದ ವಾತಾವರಣವಿದ್ದರಿಂದ ರಸ್ತೆ ಸಂಪೂರ್ಣವಾಗಿ ಕಾಣದ ಕಾರಣ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಚಕ್ರೇಶ್ ಮಿಶ್ರಾ, ''ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ'' ಎಂದು ತಿಳಿಸಿದರು.