ಮಂಗಳೂರು, ಡಿ. 16 (DaijiworldNews/SM): ದಕ್ಷಿಣ ಕನ್ನಡ ಜೆಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 23 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 32,444ಕ್ಕೆ ಏರಿಕೆಯಾಗಿವೆ. ಈ ಪೈಕಿ 408 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 4,19,707 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 3,87,263 ಮಂದಿಯ ವರದಿ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಬುಧವಾರ 20 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,305ಕ್ಕೆ ತಲುಪಿದೆ. ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 731 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ ಉಡುಪಿ ಜಿಲ್ಲೆಯಲ್ಲಿ 15 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,929ಕ್ಕೆ ಏರಿಕೆಯಾಗಿದೆ. ಈ ಪೈಕಿ 125 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 2,67,996ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,45,067 ಮಂದಿಯ ವರದಿ ನೆಗೆಟಿವ್ ಆಗಿದೆ. ಬುಧವಾರ 15 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,617ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 187 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.