ಯಾದಗಿರಿ, ಡಿ.17 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದವರೆಲ್ಲ ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, "ದೆಹಲಿಯಲ್ಲಿ ಹೋರಾಟ ಮಾಡುವವರು ರೈತರಾಗಿದ್ದರೆ ಹೊಲಗಳಲ್ಲಿ ಈಗ ಕೆಲಸ ಮಾಡುತ್ತಿದ್ದರು. ಆದರೆ, ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇರುವುದರಿಂದ ಅಲ್ಲಿರುವವರು ರೈತರಲ್ಲ, ಹಾಗೆಯೇ ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಲ್ಲ" ಎಂದರು.
ಇನ್ನು "ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಸಹಾಯಕ್ಕಾಗಿ ಉತ್ತಮ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇವುಗಳ ಬಗ್ಗೆ ಸಚಿವರೊಂದಿಗೆ ಮಾತುಕತೆಯಾಡುವುದು ಬಿಟ್ಟು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಸುವಂತೆ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.