ಬೆಂಗಳೂರು,ಡಿ.17 (DaijiworldNews/HR): ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಎಂಬವರು ತನ್ನ ಸ್ನೇಹಿತೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
2014ನೇ ಸಾಲಿನಲ್ಲಿ ಕೆಪಿಎಸ್ಸಿ ಮೂಲಕ ಕರ್ನಾಟಕ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. 2017 ನೇ ವರ್ಷದಲ್ಲಿ ಸೇವೆಗೆ ಸೇರಿದ್ದು ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ನಾಗರಭಾವಿ ವಿನಾಯಕ ಲೇಔಟ್ ನಲ್ಲಿರುವ ಸ್ನೇಹಿತೆ ಮನೆಗೆ ಹೋಗಿದ್ದ ಲಕ್ಷ್ಮೀ ಪಾರ್ಟಿಯ ನಂತರ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ರಾತ್ರಿ ಪ್ರಕರಣ ಬೆಳಕಿಗೆ ಬಂದಿತ್ತು.
ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಗೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.