ಹಾವೇರಿ,ಡಿ.17 (DaijiworldNews/HR): ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಬರಬೇಕಾಗಿದೆ, ಆದುದರಿಂದ ಅಧಿಕಾರಿಗಳಿಗೆ ಘಟನೆ ಕುರಿತು ತನಿಖೆ ನಡೆಸಬೇಕು, ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗೆ ಮನೋಸ್ತೈರ್ಯ ತುಂಬಲು ನಿರಂತರ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಸಿಐಡಿ ಡಿವೈಎಸ್ಪಿ ಲಕ್ಷ್ಮಿ ನಾಗರಭಾವಿ ವಿನಾಯಕ ಲೇಔಟ್ನಲ್ಲಿರುವ ಸ್ನೇಹಿತೆ ಮನೆಗೆ ಹೋಗಿ ಪಾರ್ಟಿಯ ನಂತರ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ರಾತ್ರಿ ಪ್ರಕರಣ ಬೆಳಕಿಗೆ ಬಂದಿತ್ತು.