ಬೆಳಗಾವಿ, ಡಿ.17 (DaijiworldNews/HR): ಗ್ರಾಮ ಪಂಚಾಯತಿ ಚುನಾವಣೆಯಿಂದಾಗಿ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ತಡೆಯಾಗಿದ್ದು, ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಬಹುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬಳಿಕ ವಿಧಾನಪರಿಷತ್ನಲ್ಲಿ ನಡೆದ ತಳ್ಳಾಟದ ಕುರಿತು ಪ್ರತಿಕ್ರಿಯಿಸಿದ ಅವರು, "ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ, ಪ್ರತಾಪಚಂದ್ರ ಶೆಟ್ಟಿ ಬಹಳ ಒಳ್ಳೆಯ ಮನುಷ್ಯ. ಅವರು ಪಕ್ಷಕ್ಕೋಸ್ಕರ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬಾರದು ಹಾಗಾಗಿ ಅವರು ರಾಜೀನಾಮೆ ನೀಡಿ ವ್ಯಕ್ತಿತ್ವ ಉಳಿಸಿಕೊಳ್ಳುವುದು ಒಳ್ಳೆಯದು" ಎಂದರು.
ಇನ್ನು "ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಿಲ್ಲ, ಜೊತೆಗೆ ಚುನಾವಣೆ ಘೋಷಣೆ ಬಳಿಕ ವರಿಷ್ಠರು ನಿರ್ಣಯ ತೆಗೆದುಕೊಳ್ಳುತ್ತಾರೆ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಪರ ಕೆಲಸಕ್ಕೆ ತಯಾರಿದ್ದೇನೆ" ಎಂದು ಹೇಳಿದ್ದಾರೆ.