ಮಂಗಳೂರು, ಡಿ. 17 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಗುರುವಾರ 40 ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 32,484ಕ್ಕೆ ಏರಿಕೆಯಾಗಿದೆ. ಈ ಪೈಕಿ 424 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,23,267 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 3,90,783 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಗುರುವಾರ 23 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,328ಕ್ಕೆ ಏರಿಕೆಯಾಗಿದೆ. ಗುರುವಾರದಂದು ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 732ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಗುರುವಾರ 15 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,941ಕ್ಕೆ ಏರಿಕೆಯಾಗಿದೆ. ಈ ಪೈಕಿ 126 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 2,69,553ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,46,612 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 11 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,628ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 187 ಸಾವುಗಳು ಸಂಭವಿಸಿವೆ.