ಬೆಂಗಳೂರು, ಡಿ.18 (DaijiworldNews/HR): ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ ಬಳಿಕ ಇದೀಗ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಪೊಲೀಸ್ ದಂಪತಿಗಳಾದ ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾನ್ಸ್ಟೆಬಲ್ಗಳಗಿದ್ದ ಇಬ್ಬರೂ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದರು, ಆದರೆ ಅವರಿಗೆ ಮಕ್ಕಳಾಗಿರಲಿಲ್ಲ ಎಂಬ ಕೊರಗು ಇತ್ತು ಎನ್ನಲಾಗಿದೆ.
ಇನ್ನು ಕರ್ತವ್ಯ ನಿರ್ವಹಿಸಿ ಮನೆಗೆ ಹೋದ ಸುರೇಶ್ ಹಾಗೂ ಶೀಲಾ, ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.
ಕೊತ್ತನೂರು ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.