ನವದೆಹಲಿ,ಡಿ.18 (DaijiworldNews/HR): ರಾಜಕೀಯ ಪಕ್ಷದವರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ನಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ, ರೈತರ ಜೀವನ ಸುಧಾರಣೆಯಾಗಬೇಕೆಂಬುದೆ ನನ್ನ ಆಸೆ, ರೈತರು ಉದ್ಧಾರವಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಮೂಲಕ ಆಧುನಿಕತೆ ಬರಬೇಕು ಎಂಬ ಉದ್ದೇಶದಿಂದ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಈ ಕುರಿತು ಮಧ್ಯ ಪ್ರದೇಶದ ರೈಸನ್ ನಲ್ಲಿ ನಡೆದ 'ಕಿಸಾನ್ ಕಲ್ಯಾಣ್' ರೈತ ಸಮಾವೇಶವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಬಳಿಕ ಮಾತನಾಡಿದ ಅವರು, "ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ತರಾತುರಿಯಲ್ಲಿ ಜಾರಿಗೆ ತಂದಿಲ್ಲ, ಬದಲಾಗಿ ಈ ಮಸೂದೆ ಜಾರಿಗೊಳಿಸುವ ಕುರಿತು ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚೆ ನಡೆಸುತ್ತಾ ಬಂದಿದೆ" ಎಂದರು.
ಇನ್ನು "ಕೃಷಿ ಕಾಯ್ದೆ ವಿಚಾರದಲ್ಲಿ ರೈತರ ಹಾದಿತಪ್ಪಿಸುವ ಕೆಲಸವನ್ನು ರಾಜಕೀಯ ಪಕ್ಷಗಳು ಮೊದಲಿಗೆ ನಿಲ್ಲಿಸಬೇಕು, ರೈತರ ಹೆಸರಿನಲ್ಲಿ ಈಗ ಪ್ರತಿಭಟನೆ ನಡೆಸುತ್ತಿರುವವರು ಅವರು ಸರ್ಕಾರ ನಡೆಸುತ್ತಿದ್ದಾಗ ರೈತರಿಗೇನು ಕೊಟ್ಟಿದ್ದಾರೆ ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.