ಡೆಹರಾಡೂನ್, ಡಿ.18 (DaijiworldNews/PY): ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಇಂದು ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಉತ್ತಮವಾಗಿದೆ. ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಹಾಗಾಗಿ ವೈದ್ಯರ ಸಲಹೆಯ ಮೇರೆಗೆ ನಾನು ಹೋಮ್ ಐಸೋಲೇಷನ್ನಲ್ಲಿರುತ್ತೇನೆ" ಎಂದು ತಿಳಿಸಿದ್ದಾರೆ.
"ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ತ್ರಿವೇಂದ್ರ ಸಿಂಗ್ ಅವರು ಈ ಹಿಂದೆ ಕೊರೊನಾದ ನಡುವೆಯೂ ಕೂಡಾ ಕುಂಭಮೇಳ ನಡೆಸುವುದಾಗಿ ತಿಳಿಸಿದ್ದರು. ಕುಂಭಮೇಳ 2021ರ ಜನವರಿ 14ರಿಂದ ಪ್ರಾರಂಭವಾಗಲಿದೆ.