ನವದೆಹಲಿ,ಡಿ.18 (DaijiworldNews/HR): ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ(ಐಸಿಎಂಆರ್)ಯ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿ ತಿಳಿಸಿದೆ.
ಕೊರೊನಾಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಡಾ.ಭಾರ್ಗವ್ ಅವರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದ್ದು, ಇಂದು ಭಾರತದಲ್ಲಿ 22,890 ಪ್ರಕರಣ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು 99.79 ಲಕ್ಷಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಇನ್ನು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಒಟ್ಟು 95 ಲಕ್ಷಕ್ಕಿಂತಲೂ ಅಧಿಕ ಮಂದಿ ಸೋಂಕಿತರು ಗುಣಮುಖರಾಗಿದ್ದು, ಕಳೆದ 24ಗಂಟೆಯಲ್ಲಿ 338 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 1,44,789ಕ್ಕೆ ಏರಿಕೆಯಾಗಿದೆ.