ಮಂಗಳೂರು, ಡಿ. 18 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 38 ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32,522ಕ್ಕೆ ಏರಿಕೆಯಾಗಿದೆ. ಈ ಪೈಕಿ 436 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 4,26,889 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 3,94,367 ಮಂದಿಯ ವರದಿ ನೆಗೆಟಿವ್ ಆಗಿದೆ. ಶುಕ್ರವಾರ 26 ಜನರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲೆಯಲ್ಲಿ ಶುಕ್ರವಾರ ಐದು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,946ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ 116 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 2,70,061 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,47,725 ಮಾದರಿಗಳು ನಕಾರಾತ್ಮಕವಾಗಿವೆ. ಶುಕ್ರವಾರ 14 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 188 ಸಾವುಗಳು ಸಂಭವಿಸಿವೆ.