ನವದೆಹಲಿ,ಡಿ.19 (DaijiworldNews/HR): ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸಿಎಂ ಸ್ಥಾನದಿಂದ ಅವರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕದ ಉಸ್ತುವಾರಿ ಹೊತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಶಿರಾ ಮತ್ತು ರಾಜರಾಜೇಶ್ವರಿ ನಗ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಮುಂದೆ ನಡೆಯಲಿರುವ ಪಂಚಾಯಿತಿ ಚುನಾವಣೆಗಳಲ್ಲಿಯೂ ಬಿಜೆಪಿ ಖಂಡಿತವಾಗಿಯೂ ಜಯಗಳಿಸಲಿದೆ. ಮುಂಬರುವ ವಿಧಾನಸಭೆ ಉಪ ಚುನಾವಣೆ, ಲೋಕಸಭಾ ಉಪಚುನಾವಣೆಯಲ್ಲಿಯೂ ಬಿಜೆಪಿಯೇ ಗೆಲುಲು ಸಾಧಿಸಲಿದೆ" ಎಂದರು.
ಇನ್ನು "ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಇಲ್ಲಿಯವರೆಗೆ ಯಾವುದೇ ದೂರು ಬಂದಿಲ್ಲ. ರಾಜ್ಯದ ಕೆಲವು ನಾಯಕರು ಕಳೆದ ತಿಂಗಳು ದೆಹಲಿಯಲ್ಲಿ ನನ್ನನ್ನು ಭೇಟಿಯಾಗಿದ್ದಾರೆ, ಅವರಲ್ಲಿ ಯಾರು ಕೂಡ ಮುಖ್ಯಮಂತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ" ಎಂದು ಹೇಳಿದ್ದಾರೆ.