ಕೋಲ್ಕತ್ತಾ, ಡಿ.19 (DaijiworldNews/PY): "ಹಲವಾರು ಮಂದಿ ನಾಯಕರು ಟಿಎಂಸಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಚುನಾವಣೆ ಸಮಯ ಹತ್ತಿರ ಬರುತ್ತಿದ್ದಂತೆ ಪಕ್ಷದಲ್ಲಿ ಮಮತಾ ಬ್ಯಾನರ್ಜಿ ಅವರು ಏಕಾಂಗಿಯಾಗಿ ಉಳಿಯಲಿದ್ದಾರೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳದ ಪಶ್ಚಿಮ್ ಮೆದಿನೀಪುರ್ನಲ್ಲಿ ನಡೆದ ಕಾರ್ಯಕ್ರಮದ ಸಂದರ್ಭ ಜನರನ್ನುದ್ದೇಶಿಸಿ ಮಾತನಾಡಿದ ಅವರು, "ಬಿಜೆಪಿ ಪಕ್ಷಕ್ಕೆ ಟಿಎಂಸಿ ಪಕ್ಷದಿಂದ ಹಲವಾರು ಮಂದಿ ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಸದ್ಯ ಪಶ್ಚಿಮ ಬಂಗಾಳದ ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ" ಎಂದಿದ್ದಾರೆ.
ಪಶ್ಚಿಮ ಬಂಗಾಳದ ಮಿಡ್ನಾಪುರ್ನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಟಿಎಂಸಿ ಮಾಜಿ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.