ಮಂಗಳೂರು, ಡಿ.19 (DaijiworldNews/PY): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 34 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32,556ಕ್ಕೆ ಏರಿಕೆಯಾಗಿದೆ.
ಒಟ್ಟು 4,29,859 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 3,97,303 ಮಂದಿಯ ವರದಿ ನೆಗೆಟಿವ್ ಆಗಿದೆ. ಶನಿವಾರ 33 ಜನರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಜಿಲ್ಲೆಯಲ್ಲಿ ಶನಿವಾರ ಎಂಟು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇನ್ನು ಜಿಲ್ಲೆಯಲ್ಲಿ 110 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಶನಿವಾರ 14 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ.