ಹಮಿರ್ಪುರ, ಡಿ.20 (DaijiworldNews/MB) : ಐದು ವರ್ಷದ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವರಿಷ್ಠಾಧಿಕಾರಿ ನರೇಂದ್ರ ಕುಮಾರ್ ಸಿಂಗ್, ಶನಿವಾರ ಮಧ್ಯಾಹ್ನದ ವೇಳೆ, ಬಾಲಕಿಯು ಆಟವಾಡುತ್ತಿದ್ದಳು. ಆ ಸಂದರ್ಭದಲ್ಲಿ ಬಾಲಕನು ಬಾಲಕಿಗೆ ಬಿಸ್ಕತ್ ನೀಡುವುದಾಗಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಅತ್ತುಕೊಂಡು ಮನೆಗೆ ವಾಪಾಸ್ ಬಂದು ತಾಯಿಗೆ ವಿಷಯ ತಿಳಿಸಿದ್ದಾಳೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಸಂತ್ರಸ್ತೆಯ ಪೋಷಕರು ನೀಡಿದ ದೂರಿನಂತೆ ಬಾಲಕನ ವಿರುದ್ದ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.