ಮಂಗಳೂರು, ಡಿ. 20 (DaijiworldNews/SM): ಡಿಸೆಂಬರ್ 20ರ ರವಿವಾರದಂದು ಉಡುಪಿ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಮಾಣವನ್ನು ದಾಖಲಾಗಿದ್ದು, ಜಿಲ್ಲೆಯಾದ್ಯಂತ ಕೇವಲ ನಾಲ್ಕು ಪ್ರಕರಣಗಳಷ್ಟೇ ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಹೊಸ ಪ್ರಕರಣಗಳು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 4,33,326 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 4,00,737 ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 32,589 ಆಗಿದ್ದು, ಈ ಪೈಕಿ ಕೇವಲ 443 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ರವಿವಾರ 27 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆಯನ್ನು 31,414 ಕ್ಕೆ ತಲುಪಿದೆ.
ಕೊರೋನಾ ವೈರಸ್ ಕಾರಣದಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ 732 ಸಾವುಗಳು ದಾಖಲಾಗಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇಲ್ಲಿಯವರೆಗೆ 2,73,414 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 2,50,456 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರ ಕೇವಲ ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 22,958 ಕ್ಕೆ ತಲುಪಿದೆ. ಈ ಪೈಕಿ ಕೇವಲ 92 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ಆಸ್ಪತ್ರೆಗಳಿಂದ ಭಾನುವಾರ 22 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 22,678ಕ್ಕೆ ತಲುಪಿದೆ.
ರವಿವಾರದಂದು ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ.
ಕೊರೊನಾವೈರಸ್ನಿಂದ ಜಿಲ್ಲೆಯಲ್ಲಿ ಇದುವರೆಗೆ 188 ಸಾವುಗಳು ಸಂಭವಿಸಿವೆ.