ಮಂಗಳೂರು, ಡಿ.21 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 24 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮೂರು ಮಂದಿಗೆ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 24 ಮಂದಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 32,613 ಕ್ಕೆ ಏರಿದೆ. ಈ ಪೈಕಿ 437 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 434,107 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 401,494 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಸೋಮವಾರ 23 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,444ಕ್ಕೆ ಏರಿಕೆಯಾಗಿದೆ. ಸೋಮವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ 732 ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮೂವರಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 22961ಕ್ಕೆ ಏರಿಕೆಯಾಗಿದೆ. ಈ ಪೈಕಿ 70 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 274133ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 251172 ಮಂದಿಯ ವರದಿ ನೆಗೆಟಿವ್ ಆಗಿದೆ. ಸೋಮವಾರ 25 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22703ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.