ಮುಂಬೈ, ಡಿ.22 (DaijiworldNews/HR): ಬ್ರಿಟನ್ ಸೇರಿದಂತೆ ಮೂರು ದೇಶಗಳಲ್ಲಿ ಹೊಸ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಬೈ ಹಾಗೂ ಮಹಾರಾಷ್ಟ್ರದ ನಗರಸಭೆ ವಲಯಗಳಲ್ಲಿ ರಾತ್ರಿ 11ರಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂವನ್ನು ಮತ್ತೆ ಜಾರಿಗೊಳಿಸಲಾಗಿದೆ.
ಬ್ರಿಟನ್ ಜೊತೆಗೆ ಯುರೋಪಿಯನ್ ಮತ್ತು ಇತರ ದೇಶಗಳಿಂದ ಬರುವ ಯಾವುದೇ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಭೆ ಬಳಿಕ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಇನ್ನು ಬ್ರಿಟನ್ನಲ್ಲಿರುವ ಹೊಸ ಕೊರೊನಾ ಅತ್ಯಂತ ಬೇಗ ಹರಡುವ ಹಿನ್ನಲೆಯಲ್ಲಿ ಡಿಸೆಂಬರ್ 31ರವರೆಗೆ ಬ್ರಿಟನ್ನಿಂದ ಭಾರತಕ್ಕೆ ಬರುವ ಎಲ್ಲ ವಿಮಾನಗಳನ್ನು ಕೂಡ ಕೇಂದ್ರ ಸರ್ಕಾರ ರದ್ದುಮಾಡಿದೆ.