ನವದೆಹಲಿ,ಡಿ.22 (DaijiworldNews/HR): ವೈಯಕ್ತಿಕ ಆಕಾಂಕ್ಷೆಗಳನ್ನು ಹೊಂದುವುದು ತಪ್ಪಲ್ಲ ಆದರೆ ಪಕ್ಷದ ಶಿಸ್ತಿಗೆ ಎಲ್ಲರೂ ಬದ್ಧರಾಗಿರಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಈ ಕುರಿತು ಕರ್ನಾಟಕ ಕಾಂಗ್ರೆಸ್ ಘಟಕದೊಳಗಿನ ಗುಂಪುಗಾರಿಕೆಗೆ ಸಂಬಂಧಿಸಿ ಮಾತನಾಡಿದ ಅವರು, "ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಎದುರಿಸಲಿದೆ. ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕಾಗಿ ಎಂ.ಬಿ. ಪಾಟೀಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಮಾಲೋಚನೆ ನಡೆಸುತ್ತಿದ್ದಾರೆ. ರಾಜ್ಯದ ಮುಖಂಡರು ಸಭೆ ಸೇರಿ ಆದಷ್ಟು ಬೇಗ ನಿರ್ಧಾರಕ್ಕೆ ಬರಲಿದ್ದಾರೆ" ಎಂದರು.
ಇನ್ನು " ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ಸದಸ್ಯರ ಭ್ರಷ್ಟಾಚಾರ ಕಣ್ಣಿಗೆ ಕಾಣುತ್ತಿದೆ, ಕರ್ನಾಟಕದ ಬಿಜೆಪಿ ಸಾವಿರ ಗುಂಪುಗಳಾಗಿ ಒಡೆದಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರವು ತನ್ನ ಭಾರಕ್ಕೆ ತಾನೇ ಕುಸಿಯಲಿದೆ" ಎಂದು ಹೇಳಿದ್ದಾರೆ.