ಧಾರವಾಡ, ಡಿ.22 (DaijiworldNews/HR): ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, ಗರಗ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗರಗ ಗ್ರಾಮದ 2ನೇ ವಾರ್ಡ್ನ ಅಭ್ಯರ್ಥಿ ದಾಮೋದರ ಯಲಿಗಾರ (25) ಎಂದು ಗುರುತಿಸಲಾಗಿದೆ.
ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆದರೆ ಚುನಾವಣೆಯ ಕಾರಣದಿಂದ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಚರ್ಚೆ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ವರದಿಯಾಗಿದೆ.