ಬೆಂಗಳೂರು,ಡಿ.22 (DaijiworldNews/HR): "ಕರ್ನಾಟಕದಲ್ಲಿ ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಬಾರಿ ಹೊಸ ವರ್ಷ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ. ಜೊತೆಗೆ ಹೊಸ ಕೊರೊನಾ ವೈರಸ್ ಇಡೀ ರಾಜ್ಯ ಮತ್ತು ದೇಶದ ಜನರನ್ನು ಇದು ಆತಂಕಕ್ಕೀಡು ಮಾಡಿದೆ, ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ. ಹಾಗಾಗಿ ನಾನು ಆದಷ್ಟು ಎಚ್ಚರದಿಂದ ಇರಬೇಕು" ಎಂದರು.
ಇನ್ನು "ಹೊರಗಡೆಯಿಂದ ಯಾರೇ ಬಂದರೂ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗುವುದು, ದೇಶದಾದ್ಯಂತ ಈಗಾಗಲೇ ಎಚ್ಚರಿಕೆ ವಹಿಸಲಾಗಿದೆ. ಜತೆಗೆ ಪ್ರಧಾನಿ ಮೋದಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.