ಬೆಂಗಳೂರು, ಡಿ.22 (DaijiworldNews/MB) : ''ಸೀಮಿತ ಅವಧಿ ಇರುವ ಹಿನ್ನೆಲೆ ಈ ಬಾರಿ ಮಾರ್ಚ್ನಲ್ಲಿ ಎಸ್ಎಸ್ಎಲ್ಸಿ-ಪಿಯುಸಿ ಪರೀಕ್ಷೆ ನಡೆಯಲ್ಲ'' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಸುದ್ದಿ ವಾಹಿನಿಯೊಂದರಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ''ಶಿಕ್ಷಣ ಇಲಾಖೆಯು ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಸಿದ್ದತೆಯನ್ನು ನಡೆಸುತ್ತಿದೆ. ಇನ್ನು ಕೆಲವೇ ತಿಂಗಳುಗಳು ಇರುವ ಹಿನ್ನೆಲೆ ಮಾರ್ಚ್ 2021ರಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯಲ್ಲ'' ಎಂದು ತಿಳಿಸಿದ್ದಾರೆ.
''ಈಗಾಗಲೇ ಮಕ್ಕಳಿಗೆ ಹೊರೆಯಾಗದಂತೆ ಪಠ್ಯಕ್ರಮವನ್ನು ಸಿದ್ದಪಡಿಸಲಾಗಿದೆ. ಕನಿಷ್ಢ ಕಲಿಕೆಗಷ್ಟೇ ಹೆಚ್ಚು ಒತ್ತು ನೀಡಲಾಗುತ್ತದೆ'' ಎಂದು ಹೇಳಿದರು.
ಇನ್ನು, ''ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಯ ನಿಟ್ಟಿನಲ್ಲಿ ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.
''ಖಾಸಗಿ ಶಾಲೆಗಳ ಸಮಸ್ಯೆಯನ್ನು ಬಗ್ಗೆ ಹರಿಸಲು ಸರ್ಕಾರ ಬದ್ದವಾಗಿದೆ. ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಸಹಾಯಕ್ಕಾಗಿ ವಿದ್ಯಾಗಮ ಕಾರ್ಯಕ್ರಮವನ್ನು, ಖಾಸಗಿ ಶಾಲೆಗಳು ಅವಳವಡಿಸಬೇಕು'' ಎಂದು ಸಲಹೆ ನೀಡಿದರು.