ಬೆಂಗಳೂರು, ಡಿ.23 (DaijiworldNews/PY): ಐಟಿ ಕಾರಿಡಾರ್ ಸಲುವಾಗಿ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.
2019ರಲ್ಲಿ ಯಡಿಯೂರಪ್ಪ ಅವರು, ತಮ್ಮ ವಿರುದ್ದದ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಈ ವಿಚಾರದ ಸಂಬಂಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ತಕರಾರು ಅರ್ಜಿಯನ್ನು ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿದೆ.
ನ್ಯಾ. ಜಾನ್ ಮೈಕಲ್ ಜಾನ್ ಅವರ ಆದೇಶದಲ್ಲಿ, "ಎಫ್ಐಆರ್ ರದ್ದುಪಡಿಸಬೇಕು ಎಂದು ಯಡಿಯೂರಪ್ಪ ಅವರ ಸಲಹೆಗಾರರ ವಾದಗಳನ್ನು ಒಪ್ಪಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.