ದೆಹಲಿ, ಡಿ. 23(DaijiworldNews/SM): ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ದೇಶದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಇದೀಗ ಹೊಸ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರೈತರು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಉತ್ತರ ಭಾರತದ ಹಲವು ರೈತ ಸಂಘಟನೆಗಳು ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ನಿರಂತರವಾಗಿ ಧರಣಿ ನಡೆಸುತ್ತಿದ್ದು, ಒಂದು ತಿಂಗಳು ಕಳೆದಿದೆ. ಇದೀಗ ಭಾರತೀಯ ಕಿಸಾನ್ ಯೂನಿಯನ್ (ಲೋಕಶಕ್ತಿ)ಮುಖ್ಯಸ್ಥ ಶಿಯೋರಾಜ್ ಸಿಂಗ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
"ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳಿ ಎಂಬುವುದು ನಮ್ಮ ಆಗ್ರಹವಾಗಿದೆ. ಕನಿಷ್ಠ ಬೆಂಬಲ ಬೆಲೆಗೆ ಖಾತರಿ ನೀಡುವಂತಹ ಕಾನೂನು ರೂಪಿಸಿ ಮತ್ತು ಕಿಸಾನ್ ಆಯೋಗ್(ರೈತ ಆಯೋಗ) ರಚಿಸುವಂತೆ" ಪ್ರಧಾನಿ ಮೋದಿಗೆ ರಕ್ತದಲ್ಲಿ ಬರೆದ ಸಂಕ್ಷಿಪ್ತ ಪತ್ರದಲ್ಲಿ ಒತ್ತಾಯಿಸಿದ್ದಾರೆ.