ಮಂಗಳೂರು, ಡಿ. 23(DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 14 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,673ಕ್ಕೆ ಏರಿಕೆಯಾಗಿದೆ. ಈ ಪೈಕಿ 415 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 4,41,198 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,08,525 ಮಂದಿಯ ವರದಿ ನೆಗೆಟಿವ್ ಆಗಿದೆ. ಬುಧವಾರ 35 ಜನರನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ 8 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,984ಕ್ಕೆ ಏರಿಕೆಯಾಗಿದೆ. ಈ ಪೈಕಿ 75 ಪ್ರಕರಣಗಳು ಪ್ರಸ್ತುತ ಸಕ್ರೀಯವಾಗಿವೆ. ಇಲ್ಲಿಯವರೆಗೆ 2,76,000ಕ್ಕೂ ಅಧಿಕ ಮಾದರಿಗಳನ್ನು ಪರೀಕ್ಷಿಸಲಾಗಿದೆ, ಅದರಲ್ಲಿ 2,53,016 ಮಂದಿಯ ವರದಿ ನಕಾರಾತ್ಮಕವಾಗಿವೆ.
ಬುಧವಾರ 11 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.