ನವದೆಹಲಿ, ಡಿ.24 (DaijiworldNews/PY): "ಕೊರೊನಾ ಹಿನ್ನೆಲೆ ಭಾರತ-ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆ ರದ್ದುಪಡಿಸಲಾಗಿದೆ" ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, "ಕೊರೊನಾ ಹಿನ್ನೆಲೆ ಈ ಬಾರಿಯ ಭಾರತ ಹಾಗೂ ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆ ನಡೆಯುವುದಿಲ್ಲ. ಎರಡೂ ದೇಶಗಳ ಸರ್ಕಾರಗಳ ಮಧ್ಯೆ ಪರಸ್ಪರ ಒಪ್ಪಿಗೆಯ ತೀರ್ಮಾನ ಇದಾಗಿದೆ" ಎಂದಿದ್ದಾರೆ.
"ಈ ವಿಚಾರವಾಗಿ ಸುಳ್ಳು ಸುದ್ದಿಗಳನ್ನು ಹರಡುವುದು ಬೇಜವಾಬ್ದಾರಿತನ. ಈ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿ ದಾರಿ ತಪ್ಪಿಸುವ ಕಾರ್ಯವನ್ನು ಮಾಡಬೇಡಿ" ಎಂದು ಹೇಳಿದ್ದಾರೆ.
ಭಾರತ ಹಾಗೂ ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆಯನ್ನು ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ ಎಂದು ಸರ್ಕಾರ ತಿಳಿಸಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ವಿಚಾರದ ಬಗ್ಗೆ ಟ್ವೀಟ್ ಮಾಡಿದ್ದು, "ರಷ್ಯಾ ಭಾರತದ ಮಿತ್ರ ರಾಷ್ಟ್ರವಾಗಿದೆ. ಸಾಂಪ್ರದಾಯಿಕ ಸಂಬಂಧಗಳಿಗೆ ಹಾನಿಯಾಗುವುದು. ಭಾರತದ ಭವಿಷ್ಯಕ್ಕೆ ಇದು ಅಪಾಯಕಾರಿಯಾಗಿದೆ" ಎಂದಿದ್ದರು.