ಶ್ರೀನಗರ, ಡಿ.24 (DaijiworldNews/PY): ಜಮ್ಮು-ಕಾಶ್ಮೀರದ ಬಾರಾಮುಲ್ಲಾ ವಾನಿಗಾಮ್ ಎಂಬ ಪ್ರದೇಶದಲ್ಲಿ ಅಡಗಿ ಕುಳಿತಿರುವ ಉಗ್ರರಿಗಾಗಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಸಾಂಧರ್ಭಿಕ ಚಿತ್ರ
ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭ ಮಾಡುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳು ಕಾಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಗುಂಡಿನ ಚಕಮಕಿಯ ಪರಿಣಾಮ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಭದ್ರತಾ ಪಡೆಗಳು ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರ ದಾಳಿಗೆ ಪ್ರತ್ಯುತ್ತರ ನೀಡುತ್ತಿದ್ದಾರೆ.