ಬೆಂಗಳೂರು,ಡಿ.24 (DaijiworldNews/HR): ಶಾಲೆಗಳನ್ನು ಪ್ರಾರಂಭಿಸುವ ವಿಚಾರದಲ್ಲಿ ನನಗಾಗಲಿ ಅಥವಾ ಸರ್ಕಾರಕ್ಕಾಗಲಿ ಪ್ರತಿಷ್ಠೆ ಇಲ್ಲ, ಮಕ್ಕಳ ಭವಿಷ್ಯವನ್ನು ಗಮನದಲ್ಲಿರಿಸಿ, ತಾಂತ್ರಿಕ ಸಲಹಾ ಸಮಿತಿ ಸಲಹೆಯ ಮೇರೆಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಬೆಂಗಳೂರನ್ನು ಮಾತ್ರ ಗಮನಿಸದೆ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯವೂ ಮುಖ್ಯವಾಗಿದ್ದು, ಬಾಲ ಕಾರ್ಮಿಕ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚರ್ಚಿಸಿ ಕೆಲ ನಿರ್ಧಾರ ಕೈಗೊಳ್ಳಲಾಗಿದೆ" ಎಂದರು.
ಇನ್ನು ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ವಿಶ್ವನಾಥ್ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದವರು ಹಾಗಾಗಿ ಅವರ ಅಭಿಪ್ರಾಯಗಳಿಗೆ ಗೌರವವಿದೆ. ಈ ಬಗ್ಗೆ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.