ನವದೆಹಲಿ, ಡಿ.24 (DaijiworldNews/MB) : ಕಳೆದ 29 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಲ್ಲಿರುವ ರೈತರು ಈಗ ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ (ಲೋಕ್ ಶಕ್ತಿ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ''ಈ ನೂತನ ಕಾಯ್ದೆಗಳು ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ನೀಡುತ್ತದೆಯೇ ಹೊರತು ರೈತರ ಹಿತಾಸಕ್ತಿಯ ಬಗ್ಗೆ ಈ ಕಾಯ್ದೆ ಗಮನ ಹರಿಸಲ್ಲ. ಈ ಕಾಯ್ದೆಯು ಸಂವಿಧಾನ ವಿರೋಧಿಯಾಗಿದೆ. ಎಪಿಎಂಸಿ ವ್ಯವಸ್ಥೆಗೆಯೇ ಧಕ್ಕೆ ಉಂಟು ಮಾಡಿತ್ತದೆ ಎಂದು ಆರೋಪಿಸಿದ್ದಾರೆ. ಹಾಗೆಯೇ ಈ ಕಾಯ್ದೆಯನ್ನು ಜಾರಿಗೆ ತಂದರೆ ರೈತರಿಗೆ ಅಪಾಯ ಕಟ್ಟಿಟ್ಟ ಬುತ್ತಿ'' ಎಂದು ಹೇಳಿದೆ.